S.N.M. PLYTECHNIC | 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ "ಕೋಟಿ ಕಂಠ ಗಾಯನ"

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ "ಕೋಟಿ ಕಂಠ ಗಾಯನ"

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ವಿನೂತನ ಅಭಿಯಾನ "ಕೋಟಿ ಕಂಠ ಗಾಯನ"- ನನ್ನ ನಾಡು ನನ್ನ ಹಾಡು, ಈ ಕಾರ್ಯಕ್ರಮ ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡಬಿದ್ರೆಯಲ್ಲಿ ಸುಂದರವಾಗಿ ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೆ.ಜೆ.ಪಿಂಟೊ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಸಂಕಲ್ಪ ವಿಧಿಯನ್ನು ಬೋಧಿಸಿದರು. 900 ವಿದ್ಯಾರ್ಥಿಗಳೊಂದಿಗೆ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ 11:25 ವರೆಗೆ ಕನ್ನಡ ಹಾಡುಗಳಾದ ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಇಂದ ಪ್ರಾರಂಭಿಸಿ,  ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ , ಹಚ್ಚೇವು ಕನ್ನಡದ ದೀಪ , ವಿಶ್ವ ವಿನೂತನ ವಿದ್ಯಾ ಚೇತನ , ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಎಂಬ ಹಾಡುಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಏಕಕಾಲದಲ್ಲಿ ಹಾಡಿ ಕನ್ನಡ ಕಹಳೆಯನ್ನು ಮೊಳಗಿಸಿದರು.